Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದ ಪುತ್ತರಿ ಕೋಲಾಟ 

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ ಸಾಂಪ್ರದಾಯಿಕ ಕಾಪಳಕಳಿ, ಕೊಂಬು, ಕೊಟ್ಟು ವಾಲಗ, ದುಡಿ ಕೊಟ್ಟ್ ಪಾಟ್‌ನೊಂದಿಗೆ ಬಿದ್ದಾಟಂಡ ವಾಡೆಗೆ ಮೆರವಣಿಗೆಯ ಮೂಲಕ ಆಗಮಿಸಿದರು. ನೂರಂಬಡ ಮಂದ್‌ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವರ ಕೋಲನ್ನು ಬರಮಾಡಿಕೊಳ್ಳಲಾಯಿತು.

ಇದನ್ನು ಓದಿ: ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ 

ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಾಲ್ಕು ಗ್ರಾಮಗಳವರು ದುಡಿಕೊಟ್ಟ್ ಪಾಟ ನೊಂದಿಗೆ ಬಿದ್ದಾಟಂಡ ವಾಡೆಗೆ ಆಗಮಿಸಿದರು. ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿ ಕೊಳ್ಳಲಾಯಿತು. ಬಳಿಕ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ದೊರೆಯಿತು.ಬಿದ್ದಾಟಂಡ ವಾಡೆಯ ಮಂದ್‌ನಲ್ಲಿ ಮೂರು ಗ್ರಾಮಸ್ಥರುಗಳೂ ಸೇರಿ ಕೋಲಾಟವನ್ನು ದೇವರ ಉದ್ಘೋಷದೊಂದಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಬಿದ್ದಾಟಂಡ ಕುಟುಂಬದ ರಮೇಶ್ ಚಂಗಪ್ಪ, ಬೇತು ಗ್ರಾಮದ ಕೊಂಡಿರ ಕುಟುಂಬದ ಗಣೇಶ್ ಅವರು ನಾಡ್ ಮಂದ್‌ನಲ್ಲಿ ನಡೆಯುವ ಕೋಲಾಟದ ಇತಿಹಾಸದ ಕುರಿತು ಮಾಹಿತಿ ನೀಡಿದರು.

Tags:
error: Content is protected !!