ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ ಸಾಂಪ್ರದಾಯಿಕ ಕಾಪಳಕಳಿ, ಕೊಂಬು, ಕೊಟ್ಟು ವಾಲಗ, ದುಡಿ ಕೊಟ್ಟ್ ಪಾಟ್‌ನೊಂದಿಗೆ ಬಿದ್ದಾಟಂಡ ವಾಡೆಗೆ ಮೆರವಣಿಗೆಯ ಮೂಲಕ ಆಗಮಿಸಿದರು. ನೂರಂಬಡ ಮಂದ್‌ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವರ ಕೋಲನ್ನು ಬರಮಾಡಿಕೊಳ್ಳಲಾಯಿತು.
ಇದನ್ನು ಓದಿ: ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್ ಸಲಹೆ
ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಾಲ್ಕು ಗ್ರಾಮಗಳವರು ದುಡಿಕೊಟ್ಟ್ ಪಾಟ ನೊಂದಿಗೆ ಬಿದ್ದಾಟಂಡ ವಾಡೆಗೆ ಆಗಮಿಸಿದರು. ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿ ಕೊಳ್ಳಲಾಯಿತು. ಬಳಿಕ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ದೊರೆಯಿತು.ಬಿದ್ದಾಟಂಡ ವಾಡೆಯ ಮಂದ್‌ನಲ್ಲಿ ಮೂರು ಗ್ರಾಮಸ್ಥರುಗಳೂ ಸೇರಿ ಕೋಲಾಟವನ್ನು ದೇವರ ಉದ್ಘೋಷದೊಂದಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಬಿದ್ದಾಟಂಡ ಕುಟುಂಬದ ರಮೇಶ್ ಚಂಗಪ್ಪ, ಬೇತು ಗ್ರಾಮದ ಕೊಂಡಿರ ಕುಟುಂಬದ ಗಣೇಶ್ ಅವರು ನಾಡ್ ಮಂದ್‌ನಲ್ಲಿ ನಡೆಯುವ ಕೋಲಾಟದ ಇತಿಹಾಸದ ಕುರಿತು ಮಾಹಿತಿ ನೀಡಿದರು.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…