ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮರಗೋಡು ಜನತಾ ಕಾಲೋನಿಯಲ್ಲಿ ನಡೆದಿದೆ
ಜನತಾ ಕಾಲೋನಿಯ ಮನೋಜ್(೨೬) ಮೃತ ಯುವಕ. ಮನೋಜ್ ಉಡುಪಿಯಲ್ಲಿ ಹೋಟೆಲ್ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ಮಧ್ಯೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್ ಮಾನಸಿಕವಾಗಿ ಆಘಾತಕ್ಕೊಳಗಾಗಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





