dussehra inauguration
ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಇನ್ನೂ ಪೂರ್ಣವಾಗಿ ಮುಟ್ಟಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವುದರಿಂದ, ಮುಂದಿನ ಸಂದರ್ಭದಲ್ಲಿ ದಲಿತ ನಾಯಕರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕು” ಎಂದು ಹೇಳಿದರು.
ಹೈಕಮಾಂಡ್ ಸೂಕ್ತ ದಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಅವರನ್ನು ಸಿಎಂ ಸ್ಥಾನಕ್ಕೆ ತರುವಂತೆ ಅವರು ಮನವಿ ಮಾಡಿದರು. ದಲಿತ ನಾಯಕರ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿರಬಾರದು ಎಂದು ಒತ್ತಿ ಹೇಳಿದ ಅವರು, ರಾಜ್ಯದಲ್ಲಿ ದಲಿತರು ಗಣನೀಯ ಸಂಖ್ಯೆಯಲ್ಲಿದ್ದು, ಸದಾ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.
“ಕಾಂಗ್ರೆಸ್‌ನ ಬೆನ್ನೆಲುಬು ಕಳೆದುಕೊಂಡರೆ ಪಕ್ಷ ಬಲವಾಗಿ ಇರಲು ಸಾಧ್ಯವಿಲ್ಲ. ಹೀಗಾಗಿ ಬೆನ್ನೆಲುಬನ್ನು ಬಲಪಡಿಸಬೇಕಾದರೆ ದಲಿತ ನಾಯಕರು ಸಿಎಂ ಆಗಬೇಕು ಎಂಬ ತೀರ್ಮಾನ ತೆಗೆದುಕೊಳ್ಳಬೇಕು. ಹೈಕಮಾಂಡ್ ಕೂಡ ಇದನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ನಂಬಿದ್ದೇನೆ” ಎಂದು ಮಹದೇವಪ್ಪ ವಿವರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತಮ್ಮ ಶ್ರಮಕ್ಕೆ ಸರಿಯಾದ ಸ್ಥಾನಮಾನ ನೀಡುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, “ಪ್ರತಿಯೊಬ್ಬರಲ್ಲೂ ಆಕಾಂಕ್ಷೆಗಳಿರುತ್ತವೆ. ಅದು ತಪ್ಪಲ್ಲ. ಆದರೆ ಎಲ್ಲವನ್ನೂ ಹೈಕಮಾಂಡ್ ಪರಿಗಣಿಸಿ ನಿರ್ಧರಿಸುತ್ತದೆ” ಎಂದು ಹೇಳಿದರು.
ಈ ಹೇಳಿಕೆಯು ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ದಲಿತ ನಾಯಕತ್ವದ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…