ಕೊಡಗು

ಮುಂದಿನ ಮುಖ್ಯಮಂತ್ರಿ ದಲಿತ ನಾಯಕರೇ ಆಗಬೇಕು : ಹೈಕಮಾಂಡ್‌ಗೆ ಎಚ್‌ಸಿ ಮಹದೇವಪ್ಪ ಒತ್ತಾಯ

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಇನ್ನೂ ಪೂರ್ಣವಾಗಿ ಮುಟ್ಟಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವುದರಿಂದ, ಮುಂದಿನ ಸಂದರ್ಭದಲ್ಲಿ ದಲಿತ ನಾಯಕರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕು” ಎಂದು ಹೇಳಿದರು.

ಹೈಕಮಾಂಡ್ ಸೂಕ್ತ ದಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಅವರನ್ನು ಸಿಎಂ ಸ್ಥಾನಕ್ಕೆ ತರುವಂತೆ ಅವರು ಮನವಿ ಮಾಡಿದರು. ದಲಿತ ನಾಯಕರ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿರಬಾರದು ಎಂದು ಒತ್ತಿ ಹೇಳಿದ ಅವರು, ರಾಜ್ಯದಲ್ಲಿ ದಲಿತರು ಗಣನೀಯ ಸಂಖ್ಯೆಯಲ್ಲಿದ್ದು, ಸದಾ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.

“ಕಾಂಗ್ರೆಸ್‌ನ ಬೆನ್ನೆಲುಬು ಕಳೆದುಕೊಂಡರೆ ಪಕ್ಷ ಬಲವಾಗಿ ಇರಲು ಸಾಧ್ಯವಿಲ್ಲ. ಹೀಗಾಗಿ ಬೆನ್ನೆಲುಬನ್ನು ಬಲಪಡಿಸಬೇಕಾದರೆ ದಲಿತ ನಾಯಕರು ಸಿಎಂ ಆಗಬೇಕು ಎಂಬ ತೀರ್ಮಾನ ತೆಗೆದುಕೊಳ್ಳಬೇಕು. ಹೈಕಮಾಂಡ್ ಕೂಡ ಇದನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ನಂಬಿದ್ದೇನೆ” ಎಂದು ಮಹದೇವಪ್ಪ ವಿವರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತಮ್ಮ ಶ್ರಮಕ್ಕೆ ಸರಿಯಾದ ಸ್ಥಾನಮಾನ ನೀಡುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, “ಪ್ರತಿಯೊಬ್ಬರಲ್ಲೂ ಆಕಾಂಕ್ಷೆಗಳಿರುತ್ತವೆ. ಅದು ತಪ್ಪಲ್ಲ. ಆದರೆ ಎಲ್ಲವನ್ನೂ ಹೈಕಮಾಂಡ್ ಪರಿಗಣಿಸಿ ನಿರ್ಧರಿಸುತ್ತದೆ” ಎಂದು ಹೇಳಿದರು.

ಈ ಹೇಳಿಕೆಯು ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ದಲಿತ ನಾಯಕತ್ವದ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

4 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

4 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

4 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

4 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

4 hours ago