Mysore
21
scattered clouds

Social Media

ಭಾನುವಾರ, 16 ಮಾರ್ಚ್ 2025
Light
Dark

ಕಟ್ಟೆಮಾಡು ದೇವಾಲಯದ ವ್ಯಾಪ್ತಿಯಲ್ಲಿ ಮತ್ತೆ ಮುಂದುವರಿದ ನಿಷೇಧಾಜ್ಞೆ

ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ಏಪ್ರಿಲ್.‌11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.

ಮೃತ್ಯುಂಜಯ ದೇವಾಲಯದ ಸುತ್ತ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು. ರ್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆಗಳನ್ನು ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಪೊಲೀಸ್‌ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ: ಕಟ್ಟೆಮಾಡು ದೇವಸ್ಥಾನದಲ್ಲಿ ಉತ್ಸವ ಸಂದರ್ಭದಲ್ಲಿ ಸ್ಥಳೀಯ ಧಾರ್ಮಿಕ ಉಡುಪು ಧರಿಸುವ ಸಂಬಂಧ ವಿವಾದ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

Tags: