ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ : ಎರಡು ತಾಲೂಕಿನ ಸಂಪರ್ಕಕ್ಕೆ ಬ್ರೇಕ್
ಮಡಿಕೇರಿ: ಕೊಡಗಿನ ಕುಶಾಲನಗರ ತಾಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಬಾಂಧವ್ಯದ ಬೆಸುಗೆಯಾಗಿದ್ದ ರಾಮಸ್ವಾಮಿ ಕಣಿವೆಯ ತೂಗು ಸೇತುವೆ ಬಂದ್ ಮಾಡಲಾಗಿದೆ.
ಇದನ್ನೂ ಓದಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ; ಪ್ರವಾಹ ಭೀತಿ
ಮಳೆಗಾಲದಲ್ಲಿ ಈ ಸೇತುವೆ ಮೇಲೆ ಓಡಾಟ ಅಪಾಯಕಾರಿ ಎನ್ನುವ ಕಾರಣಕ್ಕೆ ಗೇಟ್‌ಗೆ ತಂತಿಯ ಬಲೆ ಹೊಡೆದು ಮುಚ್ಚಲಾಗಿದೆ.
ಕಳೆದ ನಾಲ್ಕು ವರ್ಷ ಹಿಂದೆಯೇ ಹಾಳಾಗಿದ್ದ ಈ ಸೇತುವೆಯನ್ನು ಸಕಾಲದಲ್ಲಿ ದುರಸ್ತಿ ಮಾಡಿದ್ದರೆ ಇಂದು ಈ ಸ್ಥಿತಿ ಬರುತ್ತಿರಲಿಲ್ಲ ಎನ್ನುತ್ತಾರೆ ಸ್ಥಳೀಯರು.





