ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್ ಟ್ರಬಲ್‌ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈಗಾಗಲೇ ದೇಶದಲ್ಲಿ ಯಾವುದೇ ಗ್ಯಾಸ್ ಸಮಸ್ಯೆ ಇಲ್ಲ. ಎಲ್ಲಾ ರಾಜ್ಯಗಳಿಗೆ ಗ್ಯಾಸ್ ಸರಬರಾಜು ಅಗುತ್ತಿದೆ. ಈಗಾಗಲೇ ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅಧಿವೇಶನದಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರು ಭಾರತದಲ್ಲಿ ಯಾವುದೇ ರೀತಿಯಲ್ಲಿ ಗ್ಯಾಸ್ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ಗ್ಯಾಸ್ ಉತ್ಪಾದನೆ ಹೆಚ್ಚು ಮಾಡಲು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ. ಈ ಹಿಂದೆ ಒಂದು ಒಂದು ಜಾಗದಲ್ಲಿ ತೆಗೆದುಕೊಳ್ಳುತ್ತಿದ್ರು. ಅದರೆ ಇದೀಗ ಎಲ್ಲಾ ಕಡೆಯಿಂದಲೂ LPG ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.
ಇನ್ನು ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಕಾಗಿಲ್ಲ. ಯಾವುದೋ ಒಂದು ನಮ್ಮ ನಿಯಂತ್ರಣದಲ್ಲಿ ಇಲ್ಲದೇ ಇರುವ ಯುದ್ದದಿಂದ ಈ ರೀತಿಯ ಸಮಸ್ಯೆ ಅಗುತ್ತಿದೆ. ಯುದ್ದದಿಂದ ಸಾಕಷ್ಟು ಸಮಸ್ಯೆ ಅಗುತ್ತಿದ್ರು ಭಾರತ ಸರ್ಕಾರ ಎಲ್ಲರಿಗೂ LPG ಕೋಡುವ ಕೆಲಸ ಮಾಡುತ್ತಿದೆ. ಈ ರೀತಿಯ ಹೇಳಿಕೆ ಕೊಟ್ಟಿಕೊಂಡು ರಾಜಕೀಯ ಲಾಭ ಪಡೆಯುವುದು ಅತ್ಯಂತ ಖಂಡನೀಯ ಎಂದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…