ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಬಳಿಕ ಸಂಸದ ಯದುವೀರ್ ಒಡೆಯರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸಚಿವರ ಭೇಟಿ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಹ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿದೆ ಎಂದು ತಿಳಿಸಿದ್ದಾರೆ. ಆದರೆ ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…