ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇದನ್ನು ಓದಿ: ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ
ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರಹಳ್ಳಿ ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ ಕ್ಯಾತೆ, ದೊಡ್ಡಕುಂದಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.





