ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ.
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ.
ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.
ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ.
ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರೇಬಿಕಾ ಕಾಫಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆಯಿದೆ.