ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ತನ್ವೀರ್ ಮೈನಾ ಕಾರಣರಾಗಿದ್ದು, ಈ ಮೂವರನ್ನು ಆದಷ್ಟು ಬೇಗ ಬಂಧಿಸಿ ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಡಿಕೇರಿ ಬಿಜೆಪಿ ಕಾರ್ಯಕರ್ತ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ವಿನಯ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆಸಲಾಗಿತ್ತು. ವಿನಯ್ ಧೈರ್ಯ ಹೇಳಿದರೂ ಆತ್ಮಹತ್ಯೆ ಮಾಡಿಕೊಂಡಿರುವುದು ದುರ್ದೈವ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ವಿನಯ್ ಆತ್ಮಹತ್ಯೆಗೆ ಶಾಸಕ ಪೊನ್ನಣ್ಣ, ಮಂತರ್ ಗೌಡ, ಕಾಂಗ್ರೆಸ್ ಕಾರ್ಯಕರ್ತ ತನ್ವೀರ್ ಮೈನಾ ಕಾರಣ. ಮೂವರ ವಿರುದ್ಧ ಪ್ರಕರಣ ದಾಖಲಿಸಿ, ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.