ಕೊಡಗು: ಇಲ್ಲಿನ ನರಿಯಂದಡ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಚೆಯ್ಯಂಡಾಣೆ ಸಮೀಪದ ಈ ಗ್ರಾಮದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ಜೈಶಂಕರ್ ಅವರಿಗೆ ಸೇರಿದ ಹಸುವನ್ನು ಕೊಂದ ಹುಲಿ, ಅದರ ಅರ್ಧಭಾಗವನ್ನು ತಿಂದು ಹಾಕಿದೆ.
ಘಟನೆ ನಡೆದ ಸ್ಥಳದ ಸಮೀಪ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಸಂಚಾರದ ಆತಂಕ ಹೆಚ್ಚಿದ್ದು, ಹುಲಿಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಜಾನುವಾರುಗಳ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.




