ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ.
ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ರೈತರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಚಲನವಲನ ಕಂಡು ಬಂದಿದ್ದ ಸ್ಥಳಗಳಲ್ಲಿ ಮೂರ್ನಾಲ್ಕು ಬೋನುಗಳನ್ನು ಅಳವಡಿಸಿದೆ.
ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ವನ್ಯಜೀವಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಎರಡು ಸಾಕಾನೆ ಮತ್ತು 60 ಸಿಬ್ಬಂದಿ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…