ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ತೋಟದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ರಾಜ ಗಾಂಭೀರ್ಯದೊಂದಿಗೆ ಹುಲಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ.
ಈ ಘಟನೆಯಿಂದ ಗ್ರಾಮಸ್ಥರು ಮತ್ತು ತೋಟ ಕಾರ್ಮಿಕರಲ್ಲಿ ತೀವ್ರ ಆತಂಕ ಉಂಟಾಗಿದೆ. ಮೊದಲು ಹುಲಿಯೋ ಅಥವಾ ಪೆರ್ಪಣವೋ ಎಂಬ ಗೊಂದಲವಿತ್ತು. ಆದರೆ ಸಿಸಿಟಿವಿ ದೃಶ್ಯದಿಂದ ಹುಲಿ ಎಂದು ಖಚಿತವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರನ್ನು ಎಚ್ಚರದಿಂದಿರುವಂತೆ ಮನವಿ ಮಾಡಲಾಗಿದೆ. ಹುಲಿಯನ್ನು ಸೆರೆ ಹಿಡಿಯುದಾಗಿ ಡಿಸಿಎಫ್ ತಿಳಿಸಿದ್ದಾರೆ.





