ಕೊಡಗು

ಹುಲಿ ಪ್ರತ್ಯಕ್ಷ : ಜನರಲ್ಲಿ ಆತಂಕ

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.

ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ ಇದ್ದ ವಿಡಿಯೋವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೋ ಅರಣ್ಯ ಇಲಾಖೆಗೆ ಸಿಕ್ಕ ಬಳಿಕ ಸ್ಥಳಕ್ಕೆ ತೆರಳಿ ಹುಲಿ ಕಾಣಿಸಿದ್ದ ಸ್ಥಳ ಪರಿಶೀಲನೆ ನಡೆಸಿ  ಖಚಿತ ಪಡಿಸಿದ್ದಾರೆ. ಆದರೆ ಹುಲಿ ಈ ಭಾಗದಿಂದ ಬೇರೆ ಕಡೆ ಹೋಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಗ್ರಾಮದ ಸಾರ್ವಜನಿಕರು ರಾತ್ರಿ ವೇಳೆ ಓಡಾಡುವಾಗ ಜಾಗೃತೆ ವಹಿಸಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹುಲಿ ಪ್ರತ್ಯಕ್ಷ ಹಿನ್ನಲೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಹೊರಗಡೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

5 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

5 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

5 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

7 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

7 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

7 hours ago