ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ.
ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ ಹಸುವನ್ನು ಹುಲಿ ಓಡಿಸಿಕೊಂಡು ಹೋಗಿ ದಾಳಿ ನಡೆಸಿದೆ. ಆದರೆ ಹಸು ತಪ್ಪಿಸಿಕೊಂಡಿದೆ. ಹಸುವಿಗೆ ಗಾಯಗಳಾಗಿದ್ದು, ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಸ್ಥಳದ ಅನತಿ ದೂರದ ಚೀಪೆ ಕೊಲ್ಲಿ ಎಂಬಲ್ಲಿ ಹಸುವನ್ನು ಬೇಟಿಯಾಡಿ ಸ್ವಲ್ಪ ಭಾಗ ತಿಂದು ಹೋಗಿತ್ತು. ನಂತರ ಮರುದಿನ ಬೆಳಿಗ್ಗೆ ಸಮೀಪದ ಸಿ. ಕೆ ಉತ್ತಪ್ಪನವರ ತೋಟದಲ್ಲಿ ಕಾಣಿಸಿಕೊಂಡಿತು. ಇದೀಗ ಅದೇ ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…