Mysore
33
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಭೀಮನಘಂಟಿ ನಿವಾಸಿ ಟಿಪ್ಪರ್ ಚಾಲಕ ಸಂಗಮೇಶ (೨೭) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ಟಿಪ್ಪರ್‌ನಲ್ಲಿದ್ದ ಹರೀಶ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕದನೂರಿನ ಕೋಟೆರ ನವೀನ್ ಎಂಬುವವರ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮಣ್ಣನ್ನು ಸಮತಟ್ಟು ಮಾಡಲಾಗುತ್ತಿತ್ತು ಎನ್ನಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮಣ್ಣು ಟಿಪ್ಪರ್ ಮೇಲೆ ಕುಸಿದಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಟಿಪ್ಪರ್ ಚಾಲಕ ಸಂಗಮೇಶ ಮೃಪಟ್ಟರೆ ಮತ್ತೋರ್ವ ಕಾರ್ಮಿಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವೈಜ್ಞಾನಿಕವಾಗಿ ಮಣ್ಣು ತೆಗೆದಿರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!