ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಭೀಮನಘಂಟಿ ನಿವಾಸಿ ಟಿಪ್ಪರ್ ಚಾಲಕ ಸಂಗಮೇಶ (೨೭) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ಟಿಪ್ಪರ್‌ನಲ್ಲಿದ್ದ ಹರೀಶ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕದನೂರಿನ ಕೋಟೆರ ನವೀನ್ ಎಂಬುವವರ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮಣ್ಣನ್ನು ಸಮತಟ್ಟು ಮಾಡಲಾಗುತ್ತಿತ್ತು ಎನ್ನಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮಣ್ಣು ಟಿಪ್ಪರ್ ಮೇಲೆ ಕುಸಿದಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಟಿಪ್ಪರ್ ಚಾಲಕ ಸಂಗಮೇಶ ಮೃಪಟ್ಟರೆ ಮತ್ತೋರ್ವ ಕಾರ್ಮಿಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವೈಜ್ಞಾನಿಕವಾಗಿ ಮಣ್ಣು ತೆಗೆದಿರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…