ಮಡಿಕೇರಿ : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರುವ ಮೂಲಕ ತಮ್ಮ ಅಸ್ತಿತ್ವ ಉಳಿಸಲು ಪ್ರಯತ್ನಿಸಿದ್ದು, ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬೂದು ಅವರಿಗೂ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಕಷ್ಟು ಗುಂಪುಗಳಾಗಿವೆ. ಯತ್ನಾಳ್, ಈಶ್ವರಪ್ಪ, ಅಶೋಕ್, ಸಿಟಿ ರವಿ ಎಲ್ಲರೂ ಒಂದೊಂದು ಕಡೆ ಹೋಗುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ, ಜನರ ಕುಂದುಕೊರತೆ, ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೋಬ್ಬರೂ ಮಾತನಾಡುತ್ತಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಯೋಜನೆಗಳ ಬಗ್ಗೆಯೂ ಚಿಂತಿಸುತ್ತಿಲ್ಲ. ಎಲ್ಲರೂ ಅವರವರ ವೈಯಕ್ತಿಕ ಅಸ್ತಿತ್ವದ ಬಗ್ಗೆ ಗಮನಹರಿಸಿದ್ದಾರೆ. ಹಾಗೆಯೇ ಪ್ರತಾಪ್ ಸಿಂಹ ಕೂಡ ಅಸ್ತಿತ್ವ ಉಳಿಸಿಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರಿಗೆ ಟಿಕೆಟ್ ನೀಡದೆ ದೂರ ಇಟ್ಟಿರುವುದರಿಂದ ಹೈಲೆಟ್ ಆಗಲು ಕೋರ್ಟ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.
ಅತಿವೃಷ್ಟಿಯಾಗಿದೆ, ಎಲ್ಲಾ ಜಲಾಶಯಗಳು ತುಂಬಿವೆ. ಜನರು ಕೂಡ ಬಹಳ ಸಂಕಷ್ಟದಲ್ಲಿದ್ದಾರೆ. ರೈತರಿಗೂ ಸಮಸ್ಯೆಯಾಗಿದೆ. ಅದರ ಬಗ್ಗೆ ಯಾರೊಬ್ಬರೂ ಮಾತನಾಡುತ್ತಿಲ್ಲ. ಕೇವಲ ಜನರ ಹಾದಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಭೋಸರಾಜು, ಹಲವು ವರ್ಷಗಳಿಂದ ಈ ಬೇಡಿಕೆ ಇತ್ತು. ಕುರುಬ ಸಮುದಾಯ ಎಲ್ಲೆಲ್ಲಿ ಇದ್ದಾರೆಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಎಲ್ಲಿಯೂ ಗೊಂದಲ ಆಗದ ರೀತಿಯಲ್ಲಿ ಈ ಕಾರ್ಯ ಮಾಡಲಾಗುತ್ತದೆ ಎಂದರು.
ಜಾತಿಗಣತಿಯಲ್ಲಿ ಮತಾಂತರಕ್ಕೂ ಒಂದು ಕಾಲಂ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಒತ್ತಾಯಪೂರ್ವಕವಾಗಿ ಯಾರನ್ನೂ ಸೇರಿಸಲ್ಲ. ತಾವಾಗಿಯೇ ಆಗುವವರಿಗೆ ಅವಕಾಶ ಇದೆ. ಎಲ್ಲಿ ತಪ್ಪಿದೆ ಎಂದು ಹುಡುಕುವುದೇ ಬಿಜೆಪಿ ಅಜೆಂಡಾ. ಜನರಲ್ಲಿ ಗೊಂದಲ ಸೃಷ್ಟಿ ಮಾಡುವುದು, ಉತ್ತಮ ಆಡಳಿತ ವಿರುದ್ದ ಜನತೆಗೆ ಗೊಂದಲ ಮೂಡಿಸುವುದೇ ಇವರ ಕೆಲಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…