ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆ ಸುರಿದಿದ್ದು, ಕೆಲಸ ಮುಗಿಸಿ ಮನೆಗೆ ತೆರಳಲು ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕೊಡಗು ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.