ಕೊಡಗು

ಕೊಡಗು ಜಿಲ್ಲೆಯ ಹಲವೆಡೆ ಮುಂದುವರಿದ ವರುಣನ ಆರ್ಭಟ

ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ.

ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು.

ಭಾರೀ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದಂತಾಗಿತ್ತು.

ಇನ್ನು ಧಾರಾಕಾರ ಮಳೆಯಿಂದ ವಿದ್ಯುತ್‌ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

2 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

2 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

3 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

3 hours ago