Mysore
24
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

Harangi reservoir

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45 ಅಡಿ ನೀರಿನ ಮಟ್ಟ ದಾಖಲಾಗಿದೆ.

ಕಳೆದ ವರ್ಷ ಇದೇ ದಿನ 2,857.80 ಅಡಿ ನೀರಿನ ಮಟ್ಟವಿತ್ತು. ಈ ಬಾರಿ ಕಳೆದ ವರ್ಷಕ್ಕಿಂತ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿ ಇಂದು 17.80 ಮಿ.ಮೀ. ಮಳೆಯಾಗಿದೆ. ಜಲಾಶಯಕ್ಕೆ ಇಂದು 3,638 ಕ್ಯುಸೆಕ್ ನೀರು ಒಳಹರಿವಾಗುತ್ತಿದೆ. ಕಳೆದ ವರ್ಷ ಇದೇ ದಿನ 2,533 ಕ್ಯುಸೆಕ್ ಒಳಹರಿವು ದಾಖಲಾಗಿತ್ತು.

ಜಲಾಶಯದಿಂದ ಇಂದು ನದಿಗೆ 4,375 ಕ್ಯುಸೆಕ್ ಹಾಗೂ ನಾಲೆಗೆ 600 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ನದಿಗೆ 1,500 ಕ್ಯುಸೆಕ್ ಹಾಗೂ ನಾಲೆಗೆ 500 ಕ್ಯುಸೆಕ್ ನೀರು ಹೊರಹರಿವು ಇತ್ತು.

ಹಾರಂಗಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಒಳಹರಿವು ಹಾಗೂ ಹೊರಹರಿವಿನ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

Tags:
error: Content is protected !!