Mysore
23
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ನಾಳೆ ತಲಕಾವೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶೇಷ ಪೂಜೆ

ಮಡಿಕೇರಿ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಯಾಂಕಿ ಟ್ಯಾಂಕ್‌ ಕೆರೆಯಲ್ಲಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಂದಾಗಿದೆ.

ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಳೆ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಬಳಿಕ ಕಾವೇರಿ ತೀರ್ಥವನ್ನು ನೇರವಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಕಾವೇರಿಗೆ ಆರತಿ ಮಾಡಲಿದ್ದಾರೆ.

ಈ ವೇಳೆ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಶಾಸಕ ಡಾ.ಮಂತರ್‌ ಗೌಡ ಸೇರಿದಂತೆ ಅನೇಕ ಕಾಂಗ್ರೆಸ್‌ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

 

Tags:
error: Content is protected !!