Mysore
24
overcast clouds

Social Media

ಶನಿವಾರ, 12 ಏಪ್ರಿಲ 2025
Light
Dark

ನಾಳೆ ಕುಶಾಲನಗರದಲ್ಲಿ ಕಾಡಾನೆ ಕಾರ್ಯಾಚರಣೆ

ಕುಶಾಲನಗರ: ಇಲ್ಲಿನ ಗ್ರಾಮಾಂತರ ಭಾಗದಲ್ಲಿ ನಾಡಿಗೆ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸಲು ನಾಳೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ವಿರಾಜಪೇಟೆ ಅರಣ್ಯ ವಲಯದ ವಿರಾಜಪೇಟೆ ಶಾಖಾ ವ್ಯಾಪ್ತಿಗೆ ಬರುವ ಗ್ರಾಮಗಳಾದ ಬೆಳ್ಳರಿಮಾಡು, ಅರಮೇರಿ, ಕದನೂರು, ಮೈತಾಡಿ, ದೇವಣಗೇರಿ, ಕುಕ್ಲೂರು, ಐಮಂಗಲ, ಪೊದುಕೋಟೆ, ಚಂಬೆ ಬೆಳ್ಳೂರು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸುವಂತೆ ಗ್ರಾಮಸ್ಥರು ಪದೇ ಪದೇ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನಾಳೆ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಯಲಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸಬೇಕು. ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

 

Tags: