ಕುಶಾಲನಗರ: ಇಲ್ಲಿನ ಗ್ರಾಮಾಂತರ ಭಾಗದಲ್ಲಿ ನಾಡಿಗೆ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸಲು ನಾಳೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ವಿರಾಜಪೇಟೆ ಅರಣ್ಯ ವಲಯದ ವಿರಾಜಪೇಟೆ ಶಾಖಾ ವ್ಯಾಪ್ತಿಗೆ ಬರುವ ಗ್ರಾಮಗಳಾದ ಬೆಳ್ಳರಿಮಾಡು, ಅರಮೇರಿ, ಕದನೂರು, ಮೈತಾಡಿ, ದೇವಣಗೇರಿ, ಕುಕ್ಲೂರು, ಐಮಂಗಲ, ಪೊದುಕೋಟೆ, ಚಂಬೆ ಬೆಳ್ಳೂರು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸುವಂತೆ ಗ್ರಾಮಸ್ಥರು ಪದೇ ಪದೇ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನಾಳೆ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಯಲಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸಬೇಕು. ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಜಾತಿ ಗಣತಿ... ಒಬ್ಬೊಬ್ಬರದು ಒಂದೊಂದು ರೀತಿಯ ಲೆಕ್ಕಾಚಾರ... ಅವರವರ ಪ್ರಕಾರ! ಕೆಲವರದು ಗುಣಾಕಾರ ಮತ್ತೆ ಕೆಲವರದು ಭಾಗಾಕಾರ ಯಾವ ಆಕಾರ…
ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯ ತೇರಾಪಂಥ್ ಭವನದ ಬಳಿ ರಸ್ತೆ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ…
ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು ಕಳೆದ…
ಸಿರಿ ಮೈಸೂರು ಇಂತಹದೊಂದು ಶಾಂತ ಸುಂದರ ತಾಣ ಇರುವುದು ಮೈಸೂರಿನಿಂದ ಕೇವಲ ಅರ್ಧ ತಾಸು ದೂರದಲ್ಲಿ. ಅದೊಂದು ಪ್ರಶಾಂತವಾದ, ಹಸಿರು…
ಶಿಕ್ಷಣವನ್ನು ಹೊಸ ಬೆಳಕಿನಲ್ಲಿ ನೋಡುವ ವಿಶಿಷ್ಟ ಪ್ರಯತ್ನ ಇದು ವೇದ ಭದ್ರಾವತಿ ಅದೊಂದು ತಿಳಿಬೆಳಗು - ಗೆಳತಿಯರೊಂದಿಗೆ ‘ಹೊಸ ಜೀವನ ದಾರಿ’ಗೆ…