ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ ಸಂಭವಿಸಿ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಚಾಲಕ ಕೈಕಾಡು ನಿವಾಸಿ ನರೇಂದ್ರ( 33) ಮೃತ ವ್ಯಕ್ತಿ.
ನಾಪೋಕ್ಲು ಕಡೆಯಿಂದ ಶುಕ್ರವಾರ ರಾತ್ರಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಕೈಕಾಡು ಗ್ರಾಮದಲ್ಲಿರುವ ತನ್ನ ನಿವಾಸಕ್ಕೆ ತೆರಳುವ ಸಂದರ್ಭ ಅಪಘಾತ ಸಂಭವಿಸಿದೆ. ಬೇತು ಗ್ರಾಮದ ರಸ್ತೆಯ ತಿರುವಿನಲ್ಲಿರುವ ಕಾಫಿ ತೋಟದೊಳಗೆ ಚಾಲಕನ ನಿಯಂತ್ರಣ ತಪ್ಪಿ, ಈ ಸಂದರ್ಭ ಚಕ್ರದಡಿ ಸಿಲುಕಿ ಸಾವನದನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.





