ಕೊಡಗು

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ: ಚಕ್ರದಡಿಗೆ ಸಿಲುಕಿ ಚಾಲಕ ದುರ್ಮರಣ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ ನಡೆದಿದೆ.

ಕೈಕಾಡು ನಿವಾಸಿ ನರೇಂದ್ರ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಾಪೋಕ್ಲು ಕಡೆಯಿಂದ ಶುಕ್ರವಾರ ರಾತ್ರಿ 8.30ಕ್ಕೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಕೈಕಾಡು ಗ್ರಾಮದಲ್ಲಿರುವ ತನ್ನ ನಿವಾಸಕ್ಕೆ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ನಾಪೋಕ್ಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

6 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

9 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

9 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

9 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

9 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

9 hours ago