ಸುಂಟಿಕೊಪ್ಪ: ಹಾರಂಗಿ ಹಿನ್ನೀರಿನಲ್ಲಿ ನಿನ್ನೆ(ನವೆಂಬರ್.12) ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಮತ್ತೋರ್ವ ಯುವಕನ ಶವ ಪತ್ತೆಯಾಗಿದೆ.
ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಇದನ್ನು ಓದಿ : ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು
ಆ ಪೈಕಿ ಚಂಗಪ್ಪ ಎಂಬ ವಿದ್ಯಾರ್ಥಿಯ ಮೃತದೇಹ ನಿನ್ನೆಯೇ ಪತ್ತೆಯಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ರಾಜಾಸೀಟ್ ನಿವಾಸಿ ತರುಣ್ ತಮ್ಮಯ್ಯ ಮೃತದೇಹವನ್ನು ಪತ್ತೆ ಮಾಡಿದ್ದಾರೆ.
ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





