ಸೋಮವಾರಪೇಟೆ : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಸಮೀಪದ ಕೂಗೇಕೋಡಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ.
ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಾರಿಗೆ ನಿಗಮದ ಬಸ್ ಬೆಂಗಳೂರು – ಮಡಿಕೇರಿ ರಾಜ್ಯ ಹೆದ್ದಾರಿಯ ಕೂಗೇಕೋಡಿ ಜಂಕ್ಷನ್ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ತುಂಡಾಗಿವೆ. ಅದೃಷ್ಟವಶಾತ್ ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿಲ್ಲ. ಬಸ್‌ನಲ್ಲಿದ್ದ 20 ಮಂದಿ ಪ್ರಯಾಣಿಕರು ಮತ್ತು ಚಾಲಕ, ನಿರ್ವಾಹಕರಿಗೆ ಯಾವುದೇ ಅಪಾಯವಾಗಿಲ್ಲ.





