ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಾಪೋಕ್ಲು ರಸ್ತಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು.
ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಗಾಳಿ-ಮಳೆಯಿಂದ ಭಾಗಮಂಡಲ-ನಾಪೋಕ್ಲು ರಸ್ತೆಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಪರಿಣಾಮ ಕೆಲ ಸಮಯ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಂಬಂಧಪಟ್ಟ ಇಲಾಖೆಯವರು ಮರವನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಎಂದಿನಂತೆ ಆರಂಭವಾಯಿತು.
ಇದನ್ನೂ ಓದಿ:- ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ
ಇನ್ನು ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಲಾಗಿದೆ.





