ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ ಯಶಸ್ವಿನಿಯನ್ನು (16) ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಶಸ್ವಿನಿ ನೀಡಿದ ಮಾಹಿತಿ ಪ್ರಕಾರ ಅವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ (ಪಿಸಿಎಂಬಿ) ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು. ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಸಾಥ್ ನೀಡಿದ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.
ಇಬ್ಬರು ನಾಪತ್ತೆಯಾದ ಬಗ್ಗೆ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಗೊಂಡಿತ್ತು. ಆದರೆ ಇವರಿಬ್ಬರೂ ಮನೆ ಬಿಟ್ಟು ಮಂಗಳೂರು ಕಡೆಗೆ ಹೊರಟವರು ಪಣಂಬೂರು ಬೀಚ್ ನಲ್ಲಿ ಆಟವಾಡಿ ಬಳಿಕ ಬಸ್ ಹತ್ತಿಕೊಂಡು ಮುಸ್ಸಂಜೆ ವೇಳೆ ಮಲ್ಪೆ ಬೀಚಿಗೆ ಬಂದಿದ್ದಾರೆ.
ರಾತ್ರಿ ವೇಳೆ ಮಲ್ಪೆ ಬೀಚಿನಲ್ಲಿ ಆಟ ಆಡುತ್ತಿದ್ದ ವೇಳೆ ಅಬ್ಬರದ ಅಲೆಗಳಿಗೆ ಸಿಲುಕಿ ಇವರಿಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆ ಎನ್ನಲಾಗಿದೆ. ಇವರನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ. ಈ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಳು ಎಂದು ತಿಳಿದುಬಂದಿದೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…