ಕೊಡಗು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಂಜು ಹಾಗೂ ರಕ್ಷಿತ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಸುಂಟಿಕೊಪ್ಪ ಹಾಗೂ ಗರಗಂದೂರು ಗ್ರಾಮದವರು ಎಂದು ತಿಳಿದು ಬಂದಿದೆ.
ಕುಶಾಲನಗರದ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇನ್ನೂ ಮೃತ ಶವಗಳನ್ನು ಕುಶಾಲನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…