ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ನಾಗಾಲ್ಯಾಂಡ್ ರಾಜ್ಯದ ಬಸೋಸೊ ಕುಂ ಚಂಗ್(೨೩) ಹಾಗೂ ಯಾಂಕಾಂಗ್ (೨೭) ನಾಪತ್ತೆಯಾದ ಯುವಕರು.
ಕುಶಾಲನಗರದ ಹೊಟೇಲ್‌ವೊಂದರಲ್ಲಿ ಇಬ್ಬರು ಯುವಕರು ಕೆಲಸ ನಿರ್ವಹಿಸುತ್ತಿದ್ದರು. ಬುಧವಾರ ಕೆಲಸಕ್ಕೆ ರಜೆ ಮಾಡಿದ್ದ ಯುವಕರು ಮತ್ತೋರ್ವ ಯುವತಿಯೊಂದಿಗೆ ಸಂಜೆ ನದಿಯತ್ತ ತೆರಳಿದ್ದಾರೆ. ನದಿ ದಡದಲ್ಲಿ ಪಾರ್ಟಿ ಮಾಡಿದ ಬಳಿಕ ಇಬ್ಬರು ಯುವಕರು ನದಿಗಿಳಿದಿದ್ದಾರೆ. ಈ ಸಂದರ್ಭ ಆಳವಾದ ಗುಂಡಿಯಲ್ಲಿ ಮುಳುಗಿ ಯುವಕರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕತ್ತಲೆಯಾದ ಹಿನ್ನೆಲೆ ಕಾರ್ಯಾಚರಣೆ ಸಾಧ್ಯವಾಗಿಲ್ಲ. ಗುರುವಾರ ಪತ್ತೆಗೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…