ಕೊಡಗು: ಜಿಲ್ಲೆಯ ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ
ಹಸೀನಾ (50) ಎಂಬ ಮಹಿಳೆ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಹಸೀನಾ ಎಂಬುವವರು ಮೈಕ್ರೋ ಫೈನಾನ್ಸ್ ಹಾಗೂ ಮೂರ್ನಾಲ್ಕು ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದು, ಒಂದು ತಿಂಗಳಗಳಿಗೆ 40 ಸಾವಿರ ರೂ.ಗಳನ್ನು ಪಾವತಿಸಬೇಕಿತ್ತು. ಹೀಗಾಗಿ ಸಾಲವನ್ನು ಕಟ್ಟಲಾಗದೇ ಇಂದು(ಫೆಬ್ರವರಿ.12) ಮಧ್ಯಾಹ್ನದ ವೇಳೆ ಮನೆಯ ಬಾತ್‌ರೂಮ್‌ನಲ್ಲಿ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಯಹತ್ಯೆ ಮಾಡಿಕೊಂಡಿರುವ ಮಹಿಳೆಯೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಇವರಿಗೆ ಮೂವರು ಮಕ್ಕಳಿದ್ದು, ಒಬ್ಬರನ್ನು ಕೇರಳಕ್ಕೆ ವಿವಾಹ ಮಾಡಿಕೊಟ್ಟಿದ್ದರು. ಇನ್ನಿಬ್ಬರು ಗಂಡು ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಅವರ ಪತಿ ಗಾರೆ ಕೆಲಸ ಮಾಡುತ್ತಿದ್ದರು.
ಇನ್ನು ಮನೆಯಲ್ಲಿ ಯಾರು ಇಲ್ಲದ ವೇಳೆ ಹಸೀನಾ ಎಂಬುವವರು ಆತ್ಯಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.





