ಕೊಡಗು

ಮೈಕ್ರೋ ಪೈನಾನ್ಸ್ ಕಿರುಕುಳ ತಾಳಲಾರದೇ ಶನಿವಾರಸಂತೆಯಲ್ಲಿ ಮಹಿಳೆ ಆತ್ಮಹತ್ಯೆ

ಕೊಡಗು: ಜಿಲ್ಲೆಯ ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ
ಹಸೀನಾ (50) ಎಂಬ ಮಹಿಳೆ ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

ಹಸೀನಾ ಎಂಬುವವರು ಮೈಕ್ರೋ ಫೈನಾನ್ಸ್‌ ಹಾಗೂ ಮೂರ್ನಾಲ್ಕು ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದು, ಒಂದು ತಿಂಗಳಗಳಿಗೆ 40 ಸಾವಿರ ರೂ.ಗಳನ್ನು ಪಾವತಿಸಬೇಕಿತ್ತು. ಹೀಗಾಗಿ ಸಾಲವನ್ನು ಕಟ್ಟಲಾಗದೇ ಇಂದು(ಫೆಬ್ರವರಿ.12) ಮಧ್ಯಾಹ್ನದ ವೇಳೆ ಮನೆಯ ಬಾತ್‌ರೂಮ್‌ನಲ್ಲಿ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಯಹತ್ಯೆ ಮಾಡಿಕೊಂಡಿರುವ ಮಹಿಳೆಯೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಇವರಿಗೆ ಮೂವರು ಮಕ್ಕಳಿದ್ದು, ಒಬ್ಬರನ್ನು ಕೇರಳಕ್ಕೆ ವಿವಾಹ ಮಾಡಿಕೊಟ್ಟಿದ್ದರು. ಇನ್ನಿಬ್ಬರು ಗಂಡು ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಅವರ ಪತಿ ಗಾರೆ ಕೆಲಸ ಮಾಡುತ್ತಿದ್ದರು.

ಇನ್ನು ಮನೆಯಲ್ಲಿ ಯಾರು ಇಲ್ಲದ ವೇಳೆ ಹಸೀನಾ ಎಂಬುವವರು ಆತ್ಯಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

27 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

40 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

47 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

1 hour ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

1 hour ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago