ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಜಿಂಕೆಯನ್ನು ತಮ್ಮ ವಾಹನದಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ರಾತ್ರಿ ವೇಳೆ ಕಾಡು ಪ್ರಾಣಿಗಳು ರಸ್ತೆ ಮೇಲೆ ಸಂಚರಿಸುವಾಗ ಆಗಾಗ್ಗೆ ಈ ಘಟನೆಗಳು ನಡೆಯುತ್ತಿರುತ್ತವೆ. ಹೀಗಾಗಿ ವಾಹನ ಸವಾರರು ಜಾಗ್ರತೆಯಿಂದ ವಾಹನ ಚಲಾಯಿಸಬೇಕು ಎಂದು ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.