ಕೊಡಗು

ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಕಾನ್ಸ್‌ಟೇಬಲ್‌: ವಿಡಿಯೋ ವೈರಲ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈ ರಸ್ತೆಯಲ್ಲಿ ವಾಹನ ಸವಾರರು ತೆರಳಲು ಹೆಣಗಾಡುವ ಸ್ಥಿತಿಯನ್ನು ಅಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್ ಸುನೀತ್‌ರವರು ಮನಗಂಡು ರಸ್ತೆಯ ಪಕ್ಕದಲ್ಲೇ ಇದ್ದ ಕಲ್ಲುಗಳನ್ನ ತಂದು ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಗಳಿಗೆ ಹಾಕಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ.

ಇವರ ಈ ಒಂದು ಸಮಾಜ ಸೇವೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಕಾನ್ಸ್‌ಟೇಬಲ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ. ‌

ಮಡಿಕೇರಿ ಸಂಚಾರಿ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಸುನೀತ್‌ರವರು ಈ ಹಿಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ಸದ್ಯ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದಾರೆ‌.‌

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

25 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

51 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

54 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago