ಕೊಡಗು: ಇಲ್ಲಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಅಂತ್ಯಕ್ರಿಯೆ ಹುಟ್ಟೂರಿನ ಗೋಣಿಮರೂರುನಲ್ಲಿ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಮೃತ ಬಿಜೆಪಿ ಕಾರ್ಯಕರ್ತ ವಿನಯ್ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದರಾಗಿದ್ದು, ನಾಗಾವರದ ಕಂಪೆನಿಯೊಂದರ ಗೋದಾಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಇಂದು ನೆರವೇರಿಸಲಾಗಿದೆ.
ವಿನಯ್ ಅವರ ಪಾರ್ಥಿವ ಶರೀರಕ್ಕೆ ಸ್ಥಳೀಯ ಮುಖಂಡರು ಅಂತಿಮ ನಮನ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇನ್ನೂ ಅವರ ಮಡದಿ ಶೋಭಿತಾ ಅವರು ಪಾರ್ಥಿವ ಶರೀರದ ಮುಂದೆ ಗೋಳಾಟ ನಡೆಸಿದ್ದು, ಅವರ ಚಿತೆಗೆ ಸಹೋದರ ವಿವೇಕ್ ಅಗ್ನಿ ಸ್ಪರ್ಶ ಮಾಡಿದ್ದಾರೆ.