ಕೊಡಗು

ಪಂಚಭೂತಗಳಲ್ಲಿ ಲೀನರಾದ ವಿನಯ್‌ ಸೋಮಯ್ಯ

ಕೊಡಗು: ಇಲ್ಲಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಅಂತ್ಯಕ್ರಿಯೆ ಹುಟ್ಟೂರಿನ ಗೋಣಿಮರೂರುನಲ್ಲಿ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

ಮೃತ ಬಿಜೆಪಿ ಕಾರ್ಯಕರ್ತ ವಿನಯ್‌ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದರಾಗಿದ್ದು, ನಾಗಾವರದ ಕಂಪೆನಿಯೊಂದರ ಗೋದಾಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಇಂದು ನೆರವೇರಿಸಲಾಗಿದೆ.

ವಿನಯ್‌ ಅವರ ಪಾರ್ಥಿವ ಶರೀರಕ್ಕೆ ಸ್ಥಳೀಯ ಮುಖಂಡರು ಅಂತಿಮ ನಮನ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇನ್ನೂ ಅವರ ಮಡದಿ ಶೋಭಿತಾ ಅವರು ಪಾರ್ಥಿವ ಶರೀರದ ಮುಂದೆ ಗೋಳಾಟ ನಡೆಸಿದ್ದು, ಅವರ ಚಿತೆಗೆ ಸಹೋದರ ವಿವೇಕ್‌ ಅಗ್ನಿ ಸ್ಪರ್ಶ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

1 hour ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

2 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

3 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

3 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

9 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

9 hours ago