ಬೆಂಗಳೂರು : ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದ ಬಿ.ಆರ್ ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕೊಡಗು ಎಸ್.ಪಿ ನೇರ ಹೊಣೆ ಎಂಬುದು ಗೊತ್ತಾಗಿದೆ. ಕೂಡಲೇ ಎಸ್.ಪಿ ಅವರನ್ನು ಅಮಾನತು ಮಾಡಬೇಕು. ಪ್ರಕರಣ ಆರೋಪಿಗಳಾದ ಶಾಸಕ ಪೊನ್ನಣ್ಣ, ಮಂಥರ್ ಗೌಡ, ಆರೋಪಿತ ತನ್ನೀರ ಮೈನಾ ಅವರನ್ನು ಎಫ್‌ಐಆರ್‌ನಲ್ಲಿ ಸೇರಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ನೇರವಾಗಿ ಭಾಗವಹಿಸಿದ್ದಾರೆ. ಜಾಮೀನು ಪಡೆದರೂ ಯಾಕೆ ಅವರನ್ನು ಹುಡುಕುತ್ತಿದ್ದರು? ಅವರೇನು ರೌಡಿಯೇ ಎಂದು ಪ್ರಶ್ನಿಸಿದ್ದಾರೆ.
ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ…
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister…
ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ…
ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು…
ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಗ್ರಾಹಕರಿಗೆ ಅಡಚಣೆ ರಹಿತವಾದ…
ಕಲಬುರ್ಗಿ: ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…