ಕೊಡಗು

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕುಶಾಲನಗರದಲ್ಲಿ ಪ್ರತಿಭಟನೆ‌ ಕಾವು

ವರದಿ: ನವೀನ್‌ ಡಿಸೋಜ

ಕುಶಾಲನಗರ: ರಾಜ್ಯದಲ್ಲಿ ಸಂಚಲನ‌ ಮೂಡಿಸಿರುವ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ‌ ಹಾಗೂ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಬಳಿ‌ ಮೃತ ವಿನಯ್ ಮೃತದೇಹ ಇರಿಸಲಾಗಿದೆ. ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲಿಸದ ಹೊರತು ಶವಸಂಸ್ಕಾರ ನಡೆಸುವುದಿಲ್ಲ ಎಂದು ಬಿಗಿ ಪಟ್ಟು ಹಿಡಿಯಲಾಗಿದೆ.

ಬಿಜೆಪಿ ಬ್ರಹತ್ ಪ್ರತಿಭಟನೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಪೊಲೀಸ್ ಸರ್ಪಗಾವಲು ಕಂಡುಬಂದಿದೆ. ದಕ್ಷಿಣ ವಲಯ ಡಿ. ಐ. ಜಿ. ಬೋರಲಿಂಗಯ್ಯ ನೇತೃತ್ವದಲ್ಲಿ ಮೈಸೂರು ಎಸ್ ಪಿ. ವಿಷ್ಣುವರ್ಧನ್, ಹಾಸನ ಎಸ್. ಪಿ.ಸುಜಿತಾ ಸಲ್ಮಾನ್, ಮೈಸೂರು ಕ್ರೈಂ ಡಿಸಿಪಿ ಸುಂದರ ರಾಜ್, ಹಾಸನ, ಮಂಡ್ಯ ಹೆಚ್ಚುವರಿ ಎಸ್.ಪಿ ಒಳಗೊಂಡಂತೆ 400 ಪೊಲೀಸರು, 5 ಕೆ.ಎಸ್.ಆರ್.ಪಿ ತುಕಡಿ, 4 ಜಿಲ್ಲಾ ಪೊಲೀಸ್ ಸಶಸ್ತ್ರ ಪಡೆ ನಿಯೋಜಿಸಲಾಗಿದೆ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮ ರಾಜನ್ ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago