ಕೊಡಗು

ಟ್ರಾಫಿಕ್‌ ನಿಯಮ ಉಲ್ಲಂಘನೆ ; ಚಾಲಕನಿಗೆ ಬರೋಬ್ಬರಿ 60 ಸಾವಿರ ಜುಲ್ಮಾನೆ!

ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿ ಬರೋಬ್ಬರಿ 60 ಸಾವಿರ ದಂಡ ಕಕ್ಕಿದ್ದಾನೆ!

ಕುಶಾಲನಗರ ಸಂಚಾರ ಪೊಲೀಸ್ ಠಾಣಾ ಪೊಲೀಸರು ಕೊಪ್ಪ ಗೇಟ್ ಬಳಿ  ಫೆಬ್ರವರಿ 28 ರಂದು ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ KA -45 -M 5604 ಕಾರಿನ ಚಾಲಕನನ್ನು ತಪಾಸಣೆಗೆ ಒಳಪಡಿಸಿದಾಗ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಚಾಲಕನ ಹಳೆಯ IMV ಪ್ರಕರಣಗಳನ್ನು ಪರಿಶೀಲಿಸಿದಾಗ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದ 90 ಮತ್ತು ವಾಹನ ಚಲಾಯಿಸುವಾಗ ಮೊಬೈಲ್ ನಲ್ಲಿ ಮಾತನಾಡಿದ 2 ಪ್ರಕರಣಗಳು ಕಂಡುಬಂದಿವೆ.

ಈ ಎಲ್ಲಾ ಪ್ರಕರಣಗಳಲ್ಲಿ ಕುಶಾಲನಗರ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರು ಚಾಲಕನಿಗೆ ರೂ. 60,000 ದಂಡವನ್ನು ವಿಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

45 mins ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

1 hour ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

3 hours ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

4 hours ago