ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿ ಬರೋಬ್ಬರಿ 60 ಸಾವಿರ ದಂಡ ಕಕ್ಕಿದ್ದಾನೆ!
ಕುಶಾಲನಗರ ಸಂಚಾರ ಪೊಲೀಸ್ ಠಾಣಾ ಪೊಲೀಸರು ಕೊಪ್ಪ ಗೇಟ್ ಬಳಿ ಫೆಬ್ರವರಿ 28 ರಂದು ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ KA -45 -M 5604 ಕಾರಿನ ಚಾಲಕನನ್ನು ತಪಾಸಣೆಗೆ ಒಳಪಡಿಸಿದಾಗ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಚಾಲಕನ ಹಳೆಯ IMV ಪ್ರಕರಣಗಳನ್ನು ಪರಿಶೀಲಿಸಿದಾಗ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸಿದ 90 ಮತ್ತು ವಾಹನ ಚಲಾಯಿಸುವಾಗ ಮೊಬೈಲ್ ನಲ್ಲಿ ಮಾತನಾಡಿದ 2 ಪ್ರಕರಣಗಳು ಕಂಡುಬಂದಿವೆ.
ಈ ಎಲ್ಲಾ ಪ್ರಕರಣಗಳಲ್ಲಿ ಕುಶಾಲನಗರ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರು ಚಾಲಕನಿಗೆ ರೂ. 60,000 ದಂಡವನ್ನು ವಿಧಿಸಿದ್ದಾರೆ.
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…
ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…