ವಿರಾಜಪೇಟೆ : ತಾಲೂಕಿನ ಬಿಟ್ಟಂಗಾಲ ಬಾಳಗೂಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಬೈಕ್ ಸವಾರನ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಹಿಂಬದಿ ಸವಾರನಿಗೂ ತೀವ್ರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಾಳಗಿದೆ. ಕಾರಿನಲ್ಲಿ ಮೂರು ಮಕ್ಕಳು ಸೇರಿದಂತೆ ಐವರು ಪ್ರಯಾಣಿಸುತ್ತಿದ್ದರು. ಕಾರು ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.