Mysore
18
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

KSRTC Bus accident

ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ.

ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ತೀವ್ರ ಆತಂಕಗೊಂಡಿದ್ದ ಪ್ರಯಾಣಿಕರನ್ನು ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!