ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ.
ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದ ತಂಡ, ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿರತೆಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಾಗರಹೊಳೆ ಅರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.
ಇದನ್ನೂ ಓದಿ:- ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್
ಚಿರತೆ ರಕ್ಷಣೆ ಕಾರ್ಯಾಚರಣೆಯಲ್ಲಿ ಪಶುವೈದ್ಯ ರಮೇಶ್, ಎಸಿಎಫ್ ಗೋಪಾಲ್, ಆರ್‌ಎಫ್‌ಓ ಶಿವರಾಮ್, ಅರವಳಿಕೆ ತಜ್ಞ ರಂಜನ್ ಹಾಗೂ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.





