ಕೊಡಗು

ವಿರಾಜಪೇಟೆ: ಗಾಂಜಾ ಬೆಳೆದ ವ್ಯಕ್ತಿ ಬಂಧನ

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ (68) ಗಾಂಜಾ ಬೆಳೆದ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ 5 ಕೆ.ಜಿ. 500 ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ವಿರಾಜಪೇಟೆ ಉಪ ವಿಭಾಗದ ಡಿ.ವೈ. ಎಸ್ ಪಿ .ಆರ್ ಮೋಹನ್ ಕುಮಾರ್ ವಿರಾಜಪೇಟೆ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ, ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ಬಿ. ಎಸ್. ವಾಣಿಶ್ರೀ ಹಾಗೂ ಸಿಬ್ಬಂದಿಗಳು ಒಳಗೊಂಡ ವಿಶೇಷ ತಂಡ ಕಾರ್ಯಚರಣೆ ನಡೆಸಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ ಎಂದು ಹೇಳಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

4 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

4 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

4 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

5 hours ago