ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ಸಮೀಪದ ಬೊಳ್ಳರಿಮಾಡು ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ತೀವ್ರ ಹೆಚ್ಚಾಗಿದ್ದು, ಸ್ಥಳೀಯರು ಆತಂಕದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಕಾಡಾನೆ ಹಾವಳಿ ಹೆಚ್ಚುತ್ತಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಇದನ್ನೂ ಓದಿ:-ಮುಖ್ಯಮಂತ್ರಿ ಜತೆ ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್ ವೂ ಭೇಟಿ, ಚರ್ಚೆ
ಇನ್ನಾದರೂ ಹೆಚ್ಚಿನ ಅನಾಹುತ ಆಗುವುದಕ್ಕಿಂತಲೂ ಮುಂಚೆ ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿ ತಡೆಯಲು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.





