ವಿರಾಜಪೇಟೆ : ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಬ್ಯೂಟಿಪಾರ್ಲರ್‌ನೊಂದಿಗೆ ಪರವಾನಿಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತ್ತಿದ್ದುದಲ್ಲದೆ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಿ.ಪಿ. ಪ್ರದೀಪನ್(೪೮) ಮತ್ತು ಕಲೇಶ್‌ಕುಮಾರ್(೪೫), ಶಾಜಿ(೩೮), ವಿರಾಜಪೇಟೆ ಅಮ್ಮತ್ತಿ ಗ್ರಾಮದ ನೆಲ್ಲಮಕ್ಕಡ ಎ ಪೊನ್ನಣ್ಣ(೪೮) ಬಂಧಿತ ಆರೋಪಿಗಳು.
ವಿರಾಜಪೇಟೆ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಖಾಸಗಿ ಕಟ್ಟಡದಲ್ಲಿ ಪ್ರದೀಪನ್ ಮತ್ತು ಶಿಜು ಎಂಬುವವರು ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಎಂಬ ಮಳಿಗೆ ನಡೆಸುತ್ತಿದ್ದರು. ಇಲ್ಲಿ ಸುಮಾರು ೬ ತಿಂಗಳುಗಳಿಂದ ಹೊರ ರಾಜ್ಯಗಳ ಐಷಾರಾಮಿ ವಾಹನಗಳು ಬಂದು ನಿಲುಗಡೆಗೊಂಡು ಮರಳುತ್ತಿದ್ದು, ವೇಶ್ಯವಾಟಿಕೆಯು ಚಟುವಟಿಕೆಗಳು ನಡೆಯುತ್ತಿದೆ ಎಂಬುದಾಗಿ ಸ್ಥಳೀಯರಲ್ಲಿ ಸಂಶಯ ಮೂಡಿತ್ತು.
ಈ ಸಂಬಂಧ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಪರವಾನಿಗೆ ಪಡೆದು ಅಕ್ರಮವಾಗಿ ಸ್ಪಾ, ಮಸಾಜ್ ಸೆಂಟರ್ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೆ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.
ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…